Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ಅಬ್ರಹಾಮನೊಡನೆ ಒಡಂಬಡಿಕೆ ಮಾಡಿಕೊಂಡನು. ಆತನು ಇಸಾಕನಿಗೆ ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:9
13 ತಿಳಿವುಗಳ ಹೋಲಿಕೆ  

ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು” ಎಂದನು.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,


ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.


ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.


ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು.


ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.


ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.


ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು