Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮರೆಯಬೇಡೆನ್ನನು ಪ್ರಭು, ನಿನ್ನ ಪ್ರಜೆಗೆ ದಯೆತೋರುವಾಗ I ನೆರವು ನೀಡೆನಗೆ ಸ್ವಾಮಿ, ನೀನಾ ಜನರನು ಉದ್ಧರಿಸುವಾಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ದಯೆತೋರು. ನಿನ್ನ ಜನರನ್ನು ರಕ್ಷಿಸುವಾಗ ನನ್ನನ್ನು ನೆನಪು ಮಾಡಿಕೊಂಡು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರೇ, ನಿಮ್ಮ ಜನರ ಮೇಲಿರುವ ಮೆಚ್ಚುಗೆಯಿಂದ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ, ನಿಮ್ಮ ರಕ್ಷಣೆಯಿಂದ ನನ್ನನ್ನು ದರ್ಶಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:4
9 ತಿಳಿವುಗಳ ಹೋಲಿಕೆ  

ನನಗೆ ಅಭಿಮುಖನಾಗಿ ಕರುಣಿಸು, ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ?


“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.


ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.


ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.


“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.


ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.


ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು