Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಮ್ಮ ಪಿತೃಗಳಂತೆಯೆ ಪಾಪಿಗಳು ನಾವು I ಅಕ್ರಮಗೈದೆವು, ಅಪರಾಧಿಗಳಾದೆವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಮ್ಮ ಪಿತೃಗಳಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಮ್ಮ ಪೂರ್ವಿಕರು ಪಾಪಮಾಡಿದಂತೆಯೇ ನಾವು ಪಾಪ ಮಾಡಿದೆವು. ನಾವು ಅಪರಾಧಿಗಳಾಗಿದ್ದೆವು; ದುಷ್ಕೃತ್ಯಗಳನ್ನು ಮಾಡಿದೆವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಮ್ಮ ಪಿತೃಗಳಂತೆ ನಾವು ಕೂಡಾ ಪಾಪಮಾಡಿದ್ದೇವೆ; ಅಕ್ರಮ ಮಾಡಿದ್ದೇವೆ; ದುಷ್ಟಕೃತ್ಯಗಳನ್ನು ನಡೆಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:6
14 ತಿಳಿವುಗಳ ಹೋಲಿಕೆ  

ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.


ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.


ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,


“ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ


ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.


ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.


ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.


“ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.


ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆಮಾಡಿಕೊಳ್ಳಲು ಸಾಧ್ಯ? ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ.


ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು