Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನು ಈಜಿಪ್ಟಿನಲಿ I ಸ್ಮರಿಸಲಿಲ್ಲವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ I ಬದಲಿಗೆ ಮಹೋನ್ನತನನೆ ಪ್ರತಿಭಟಿಸಿದರು ಕೆಂಗಡಲಬಳಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಈಜಿಪ್ಟಿನಲ್ಲಿ ಮಾಡಿದ ಮಹತ್ಕಾರ್ಯಗಳಿಂದ ನಮ್ಮ ಪೂರ್ವಿಕರು ಏನೂ ಕಲಿತುಕೊಳ್ಳಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:7
19 ತಿಳಿವುಗಳ ಹೋಲಿಕೆ  

ಅವರು ಆತನ ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ,


ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು.


ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.


“ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”


ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.


ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.


“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು,


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.


ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು