Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು I ಆತನ ಪ್ರೀತಿ ಶಾಶ್ವತ, ಆತನು ಒಳ್ಳೆಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು! ಆತನ ಪ್ರೀತಿ ಶಾಶ್ವತವಾದದ್ದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರನ್ನು ಕೊಂಡಾಡಿರಿ, ಅವರು ಒಳ್ಳೆಯವರು; ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:1
15 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.


ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ.


ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.


ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.


ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.


ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ, ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.


ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು