Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡಿಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ಅವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:31
17 ತಿಳಿವುಗಳ ಹೋಲಿಕೆ  

ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.


ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.


ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.


ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,


ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”


ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.


ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.


ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.


ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು