Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ಕೇಡು ತೊಂದರೆಗಳಿಂದಲೂ, ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ತದನಂತರ ಕುಗ್ಗಿತವರ ಅಂಕೆ ಸಂಖ್ಯೆ I ಕಷ್ಟಸಂಕಟ, ತಾಪತ್ರಯಗಳ ಮಧ್ಯೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರು ಕೇಡುತೊಂದರೆಗಳಿಂದಲೂ ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ವಿಪತ್ತುಗಳಿಂದಲೂ ತೊಂದರೆಗಳಿಂದಲೂ ಅವರ ಕುಟುಂಬಗಳು ಚಿಕ್ಕದಾಗಿದ್ದವು; ಬಲಹೀನವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದರೆ ಜನರು ಸಂಖ್ಯೆಯಲ್ಲಿ ಕಡಿಮೆಯಾಗಿ ಚಿಂತೆ ಸಂಕಟದಿಂದ ಕುಗ್ಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:39
17 ತಿಳಿವುಗಳ ಹೋಲಿಕೆ  

ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.


ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.


ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ಏಳು ವರ್ಷಗಳಾದ ನಂತರ ಆಕೆಯು ಫಿಲಿಷ್ಟಿಯರ ದೇಶದಿಂದ ಸ್ವದೇಶಕ್ಕೆ ಬಂದು, ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಹೋದಳು.


ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.


ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.


ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು, ಅವುಗಳನ್ನು ವಿಸ್ತರಿಸಿ ಗಡೀಪಾರುಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು