ಕೀರ್ತನೆಗಳು 108:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದೇವಾ, ನೀ ನಮ್ಮನು ಕೈಬಿಟ್ಟಿರುವುದು ಸರಿಯೋ? I ನಮ್ಮ ಸೈನ್ಯಸಮೇತ ನೀ ಬರದೆ ಹೋದೆಯೋ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರೇ, ನೀನು ನಮ್ಮನ್ನು ತ್ಯಜಿಸಿ, ನಮ್ಮ ಸೈನ್ಯದೊಡನೆ ಹೋಗದಿರುವುದು ನಿಜವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರೇ, ಈಗ ನೀವು ನಮ್ಮ ಸೈನ್ಯಗಳ ಸಂಗಡ ಹೊರಡುವುದಿಲ್ಲವೋ ನಮ್ಮನ್ನು ಕೈಬಿಟ್ಟಿದ್ದೀರೋ? ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.