Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತಿರುಕರಂತೆ ಅಲೆಯಲಿ ಅವನ ಮಕ್ಕಳು ಭಿಕ್ಷೆಬೇಡುತ I ಹೊರದೂಡಲ್ಪಡಲಿ ತಮ್ಮ ಪಾಳುಬಿದ್ದಾಮನೆಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು ತಿರುಕರಂತೆ ಅಲೆಯುತ್ತಾ ಭಿಕ್ಷೆಬೇಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನ ಮಕ್ಕಳು ತಮ್ಮ ಮನೆಯನ್ನು ಕಳೆದುಕೊಂಡು ತಿರುಕರಂತೆ ಅಲೆಯುತ್ತಾ ಭಿಕ್ಷುಕರಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಲಿ, ತಮ್ಮ ಹಾಳು ಮನೆಯಿಂದ ಹೊರಟು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:10
10 ತಿಳಿವುಗಳ ಹೋಲಿಕೆ  

ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.


ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ, ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು.


ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ.


ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.


ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.


ಅವನ ಮಕ್ಕಳು ಆಶ್ರಯವಿಲ್ಲದೆ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ.


ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು