Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನ ಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರೆನ್ನನು ಶಪಿಸಿದರೂ ನೀನೆನ್ನನು ಹರಸು I ನನ್ನೆದುರಾಳಿಗೆ ಅಪಮಾನವನು ಹೊರಿಸು I ನಿನ್ನ ದಾಸನೆನಗೆ ಆನಂದವನು ಪಾಲಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆ ದುಷ್ಟರು ನನ್ನನ್ನು ಶಪಿಸುತ್ತಾರೆ; ಯೆಹೋವನೇ, ನೀನಾದರೋ ನನ್ನನ್ನು ಆಶೀರ್ವದಿಸುವೆ. ನನಗೆ ವಿರೋಧವಾಗಿ ಎದ್ದಿರುವ ಅವರನ್ನು ಸೋಲಿಸು. ಆಗ, ನಿನ್ನ ಸೇವಕನಾದ ನಾನು ಸಂತೋಷವಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಶಪಿಸಲಿ, ಆದರೆ ನೀವು ಆಶೀರ್ವದಿಸಿರಿ. ನನಗೆ ಹಾನಿಮಾಡುವವರು ನಾಚಿಕೆಪಡಲಿ; ಆದರೆ ನಿಮ್ಮ ಸೇವಕನಾದ ನಾನು ಸಂತೋಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:28
9 ತಿಳಿವುಗಳ ಹೋಲಿಕೆ  

ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.


ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.


ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!


ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.


ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’


ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು