Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಾಕಿಹರು ದ್ವೇಷತುಂಬಿದ ಮಾತುಗಳ ಮುತ್ತಿಗೆ I ನನ್ನ ಎದುರಿಸುತಿಹರು ನಿಷ್ಕಾರಣವಾಗಿಯೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಹಗೆನುಡಿಗಳಿಂದ ನನ್ನನ್ನು ಮುತ್ತಿಕೊಂಡು ನಿಷ್ಕಾರಣವಾಗಿ ನನ್ನ ಸಂಗಡ ಯುದ್ಧಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ನನ್ನನ್ನು ದ್ವೇಷಿಸುತ್ತಾರೆ; ನಿಷ್ಕಾರಣವಾಗಿ ನನಗೆ ಎದುರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದ್ವೇಷ ಮಾತುಗಳಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:3
14 ತಿಳಿವುಗಳ ಹೋಲಿಕೆ  

ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.


ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.


ಅವು ದಿನವೆಲ್ಲಾ ನೀರಿನಂತೆ ನನ್ನನ್ನು ಆವರಿಸಿಕೊಂಡಿವೆ; ಒಟ್ಟುಗೂಡಿ ನನ್ನನ್ನು ಸುತ್ತಿಬಿಟ್ಟಿವೆ.


ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.


ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.


ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.


ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.


ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.


ನನ್ನ ಸ್ವಾಮಿಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೇ? ನಾನೇನು ಮಾಡಿದೆನು?


ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು