Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿ ಎಂದು ತೀರ್ಪುಹೊಂದಲಿ; ಅವನ ಪ್ರಾರ್ಥನೆಯೂ ಪಾಪವೆಂದು ಎಣಿಸಲ್ಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಪರಾಧಿಯಾಗಲಿ ಅವನು ನ್ಯಾಯವಿಚಾರಣೆಯಲಿ I ಅವನ ಪ್ರಾರ್ಥನೆಯೂ ಪಾಪವಾಗಿ ಎಣಿಸಲ್ಪಡಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿಯೆಂದು ತೀರ್ಪುಹೊಂದಲಿ; ಅವನ ಪ್ರಾರ್ಥನೆಯೂ ಪಾಪವೆಂದು ಎಣಿಸಲ್ಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನ್ಯಾಯವಿಚಾರಣೆಯಲ್ಲಿ ನ್ಯಾಯಾಧೀಶನು ಅವನನ್ನು ಅಪರಾಧಿಯೆಂದು ನಿರ್ಣಯಿಸಲಿ. ನನ್ನ ಶತ್ರುವಿನ ಪ್ರತಿವಾದವು ಅವನಿಗೆ ಮತ್ತಷ್ಟು ಕೇಡು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನಿಗೆ ನ್ಯಾಯತೀರಿಸುವಾಗ ಅಪರಾಧಿಯೆಂದು ತೀರ್ಪು ಹೊಂದಲಿ; ಅವನ ಪ್ರಾರ್ಥನೆಯೇ ಅವನನ್ನು ಖಂಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:7
9 ತಿಳಿವುಗಳ ಹೋಲಿಕೆ  

ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.


ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು