ಕೀರ್ತನೆಗಳು 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ. ಅಧ್ಯಾಯವನ್ನು ನೋಡಿ |