ಕೀರ್ತನೆಗಳು 110:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ನಿನ್ನ ರಾಜದಂಡದ ಆಳಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು. ಅಧ್ಯಾಯವನ್ನು ನೋಡಿ |
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.