Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 111:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಮೋಚನೆಯನಿತ್ತಿಹನು ಪ್ರಭು ತನ್ನ ಪ್ರಜೆಗೆ I ಸ್ಥಿರಸ್ಥಾಪಿತವಾಗಿಹುದು ಆತನ ಒಡಂಬಡಿಕೆ I ಪರಿಶುದ್ಧ, ಪರಮಪೂಜ್ಯ ಆತನ ನಾಮಾಂಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನುಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ ಭಯಂಕರವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ತನ್ನ ಜನರನ್ನು ರಕ್ಷಿಸಿ ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆ. ಆತನ ಹೆಸರು ಅದ್ಭುತವಾಗಿಯೂ ಪರಿಶುದ್ಧವಾಗಿಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ತಮ್ಮ ಜನರಿಗೆ ವಿಮೋಚನೆಯನ್ನು ಕಳುಹಿಸಿದರು; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸಿದ್ದಾರೆ; ದೇವರ ಹೆಸರು ಪರಿಶುದ್ಧರು, ಅತಿಶಯರು ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 111:9
31 ತಿಳಿವುಗಳ ಹೋಲಿಕೆ  

ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


“ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;


ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,


ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.


ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ


ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.


ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.


ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.


ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು