Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 113:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಲ್ಲೆಲೂಯ I ಪ್ರಭುವಿನ ದಾಸರೇ, ಸ್ತುತಿಮಾಡಿ I ಪ್ರಭುವಿನ ನಾಮಸ್ತುತಿಯನು ಮಾಡಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾಹುವಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನಾಮಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ! ಆತನ ಹೆಸರನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರ ಸೇವಕರೇ, ಯೆಹೋವ ದೇವರ ಹೆಸರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 113:1
11 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.


ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ.


ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.


ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.


ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.


ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.


ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು