Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 113:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಂಜೆಯಾದವಳನು ಮಕ್ಕಳ ತಾಯಾಗಿಸುವನು I ಆನಂದದಿಂದಾಕೆ ಬೆಳಗಿಸುವಳಾ ಮನೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಂಜೆಯು ಮಕ್ಕಳೊಂದಿಗಳಾಗಿ ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯಾಹುವಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ ಸಂತೋಷಪಡಿಸುವನು. ಯೆಹೋವನಿಗೆ ಸ್ತೋತ್ರವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬಂಜೆಯಾದವಳನ್ನು ಮಕ್ಕಳ ಸೌಭಾಗ್ಯದಲ್ಲಿ ಸಂತೋಷಿಸಿ, ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾರೆ. ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 113:9
10 ತಿಳಿವುಗಳ ಹೋಲಿಕೆ  

ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.


ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.


“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.


“ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ.


ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


ಆದರೆ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು.


ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು