Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 115:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪ್ರಭುವಿನಲ್ಲಿದೆ ಭರವಸೆ ಆರೋನನ ಕುಲಕೆ I ಆತನೇ ಸಹಾಯಕ, ರಕ್ಷಾಕವಚ ಅವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನೂ ಗುರಾಣಿಯೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆರೋನನ ಮನೆಯವರೇ, ಯೆಹೋವ ದೇವರಲ್ಲಿ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ, ಗುರಾಣಿಯೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 115:10
6 ತಿಳಿವುಗಳ ಹೋಲಿಕೆ  

ಆರೋನನ ಮನೆತನದವರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.


ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.


ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.


ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.


ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು