Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎತ್ತಿ ಹಿಡಿವೆನು ರಕ್ಷಣೆಯ ಪಾನಪಾತ್ರೆಯನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ರಕ್ಷಣಾಪಾತ್ರೆಯನ್ನು ತೆಗೆದುಕೊಂಡು ಯೆಹೋವನಾಮವನ್ನು ಪ್ರಖ್ಯಾತಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನನ್ನು ರಕ್ಷಿಸಿದ್ದರಿಂದ ಆತನಿಗೆ ಪಾನದ್ರವ್ಯವನ್ನು ಅರ್ಪಿಸುವೆನು. ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ರಕ್ಷಣೆಯ ಪಾತ್ರೆಯನ್ನು ತೆಗೆದುಕೊಂಡು, ಯೆಹೋವ ದೇವರ ಹೆಸರನ್ನು ಕರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:13
11 ತಿಳಿವುಗಳ ಹೋಲಿಕೆ  

ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.


ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.


ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.


ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.


ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?


ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.


ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.


ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು