Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 117:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸ್ತುತಿ ಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ I ಆತನನು ಹೊಗಳಿ ಹಾಡಿ ಸರ್ವಜನಾಂಗಗಳೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸರ್ವಜನಾಂಗಗಳೇ, ಯೆಹೋವನನ್ನು ಕೊಂಡಾಡಿರಿ. ಸರ್ವಜನರೇ, ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಲ್ಲಾ ದೇಶಗಳೇ, ಯೆಹೋವ ದೇವರನ್ನು ಸ್ತುತಿಸಿರಿ; ಸಮಸ್ತ ಜನರೇ, ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 117:1
12 ತಿಳಿವುಗಳ ಹೋಲಿಕೆ  

ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ಮತ್ತೊಮ್ಮೆ, “ಸರ್ವಜನಾಂಗಗಳೇ, ಕರ್ತನನ್ನು ಕೀರ್ತಿಸಿರಿ, ಸಮಸ್ತಪ್ರಜೆಗಳು ಆತನನ್ನು ಸಂಕೀರ್ತಿಸಲಿ” ಎಂದೂ ಬರೆದದೆ.


ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. ಸೆಲಾ


ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು