ಕೀರ್ತನೆಗಳು 118:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೋವನೇ ದೇವರು. ಆತನು ನಮ್ಮನ್ನು ಸ್ವೀಕರಿಸಿಕೊಳ್ಳುವನು. ಯಜ್ಞಕ್ಕೋಸ್ಕರ ಕುರಿಮರಿಯನ್ನು ಕಟ್ಟಿ ಯಜ್ಞವೇದಿಕೆಯ ಕೊಂಬುಗಳ ಸಮೀಪಕ್ಕೆ ಹೊತ್ತುಕೊಂಡು ಬನ್ನಿರಿ” ಎಂದು ಯಾಜಕರು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರು ದೇವರಾಗಿದ್ದಾನೆ; ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ. ಅಧ್ಯಾಯವನ್ನು ನೋಡಿ |
ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು.