Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸರ್ವಸಂಪತ್ತಿನಲ್ಲಿ ಹೇಗೋ, ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಿರಿಸಂಪತ್ತಿಗಿಂತ ಮಿಗಿಲಾಗಿ I ಆನಂದಿಪೆ ನಿನ್ನ ಮಾರ್ಗಿಯಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸರ್ವಸಂಪತ್ತಿನಲ್ಲಿ ಹೇಗೋ ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ನಿನ್ನ ಒಡಂಬಡಿಕೆಯನ್ನು ಅಭ್ಯಾಸ ಮಾಡುವುದರಲ್ಲಿ ಆನಂದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮಹಾ ಸಂಪತ್ತಿನಲ್ಲಿ ಒಬ್ಬ ವ್ಯಕ್ತಿ ಆನಂದಿಸುವ ಹಾಗೆ ನಾನು ನಿಮ್ಮ ಶಾಸನಗಳನ್ನು ಅನುಸರಿಸುವುದರಲ್ಲಿ ಆನಂದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:14
12 ತಿಳಿವುಗಳ ಹೋಲಿಕೆ  

“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.


ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!


ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.


ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.


ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.


ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.


ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.


ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ, ಅವು ನನಗೆ ಇಷ್ಟವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು