Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:149 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

149 ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು, ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

149 ಪ್ರೀತಿಯಿಂದ ಹೇ ಪ್ರಭೂ, ಕೇಳೆನ್ನ ಮೊರೆಯನು I ನಿನ್ನ ವಿಧಿಗನುಸಾರ ಚೇತನಗೊಳಿಸೆನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

149 ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು; ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

149 ಯೆಹೋವನೇ, ನಿನ್ನ ಪೂರ್ಣ ಪ್ರೀತಿಯಿಂದ ನನಗೆ ಕಿವಿಗೊಡು. ನಿನ್ನ ನಿಯಮಗಳಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

149 ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನ ಮೊರೆಯನ್ನು ಕೇಳಿರಿ; ನಿಮ್ಮ ನಿಯಮಗಳ ಅನುಸಾರವಾಗಿ ನನ್ನ ಬದುಕನ್ನು ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:149
12 ತಿಳಿವುಗಳ ಹೋಲಿಕೆ  

ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ, ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. ವಾವ್.


ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿಮಿತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.


ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ, ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು.


ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.


ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು, ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.


ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು. ಲಾಮೆದ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು