Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:156 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

156 ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ, ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

156 ನಿನ್ನ ಕೃಪಾಕಾರ್ಯಗಳು, ಹೇ ಪ್ರಭೂ, ಅಪಾರ I ಚೇತನಗೊಳಿಸೆನ್ನನು, ನಿನ್ನ ವಿಧಿಗಳಿಗನುಸಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

156 ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ; ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

156 ಯೆಹೋವನೇ, ನೀನು ಎಷ್ಟೋ ಕರುಣೆಯುಳ್ಳವನು. ನಿನ್ನ ಚಿತ್ತಾನುಸಾರವಾಗಿ ನನ್ನನ್ನು ಉಜ್ಜೀವನಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

156 ಯೆಹೋವ ದೇವರೇ, ನಿಮ್ಮ ಅನುಕಂಪವು ಮಹತ್ತಾದವುಗಳು; ನಿಮ್ಮ ನಿಯಮಗಳ ಪ್ರಕಾರ ನನ್ನ ಬದುಕನ್ನು ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:156
9 ತಿಳಿವುಗಳ ಹೋಲಿಕೆ  

ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.


ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.


ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.


ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು.


ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.


ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು