Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:165 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

165 ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

165 ಅತಿ ನೆಮ್ಮದಿಯುಂಟು ನಿನ್ನ ಶಾಸ್ತ್ರಪ್ರಿಯರಿಗೆ I ವಿಘ್ನಕರವಾದುದೇನೂ ಇರದು ಅಂಥವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

165 ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುತ್ತದೆ; ಅಂಥವರಿಗೆ ವಿಘ್ನಕರವಾದದ್ದೇನೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

165 ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುವುದು. ಅವರನ್ನು ಯಾವುದೂ ಬೀಳಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

165 ನಿಮ್ಮ ನಿಯಮ ಪ್ರಿಯರಿಗೆ ಅಪಾರ ಸಮಾಧಾನವಿರುತ್ತದೆ, ಅಂಥವರಿಗೆ ಆತಂಕವೇನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:165
18 ತಿಳಿವುಗಳ ಹೋಲಿಕೆ  

ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.


ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.


ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.


ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ.


“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ನನ್ನ ದೇವರು ನುಡಿಯುತ್ತಾನೆ.


ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.


ನಿನ್ನ ನಿಯಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ಲಭಿಸಿತು. ಹೇತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು