Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:172 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

172 ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ, ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

172 ವರ್ಣಿಸಲಿ ನನ್ನ ನಾಲಿಗೆ ನಿನ್ನ ನುಡಿಗಳನು I ನಿನ್ನ ಕೈ ನೀಡಲಿ ನನಗೆ ನೆರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

172 ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ; ನಿನ್ನ ಆಜ್ಞೆಗಳೆಲ್ಲಾ ನೀತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

172 ನನ್ನ ನಾಲಿಗೆಯು ನಿನ್ನ ವಾಕ್ಯವನ್ನು ಗಾಯನ ಮಾಡಲಿ. ನಿನ್ನ ಆಜ್ಞೆಗಳೆಲ್ಲಾ ನೀತಿಯ ಆಜ್ಞೆಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

172 ನಿಮ್ಮ ಆಜ್ಞೆಗಳೆಲ್ಲಾ ನೀತಿಯುಳ್ಳವುಗಳಾಗಿವೆ, ಆದುದರಿಂದ ನನ್ನ ನಾಲಿಗೆಯು ನಿಮ್ಮ ವಾಕ್ಯವನ್ನು ಹಾಡಿ ಹರಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:172
15 ತಿಳಿವುಗಳ ಹೋಲಿಕೆ  

ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.


ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.


ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.


ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.


ನಿನ್ನ ನೀತಿಯು ನಿತ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ.


ನೀತಿ, ಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದಿ,


ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ, ಅವರು ಮೋಸದಿಂದ ಹಿಂಸಿಸುತ್ತಾರೆ, ನನಗೆ ಸಹಾಯಮಾಡು.


ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, ನನ್ನ ತುಟಿಗಳು ವರ್ಣಿಸುತ್ತವೆ.


ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.


ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.


ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.


ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ. ಪೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು