Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:175 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

175 ನನ್ನ ಪ್ರಾಣವನ್ನು ಉಳಿಸು, ಅದು ನಿನ್ನನ್ನು ಕೊಂಡಾಡಲಿ. ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

175 ಉಳಿಸೆನ್ನ ಪ್ರಾಣವನು, ಭಜಿಪೆ ನಿನ್ನನು I ನೀಡಲಿ ಎನಗೆ ನಿನ್ನ ವಿಧಿಗಳು ನೆರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

175 ನನ್ನ ಪ್ರಾಣವನ್ನು ಉಳಿಸು; ಅದು ನಿನ್ನನ್ನು ಕೊಂಡಾಡಲಿ. ನಿನ್ನ ವಿಧಿಗಳಿಂದ ನನಗೆ ಸಹಾಯವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

175 ನಾನು ಜೀವದಿಂದಿದ್ದು ನಿನ್ನನ್ನು ಕೊಂಡಾಡುವಂತೆ ಮಾಡು. ನಿನ್ನ ನಿಯಮಗಳು ನನಗೆ ಸಹಾಯಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

175 ನಿಮ್ಮನ್ನು ಸ್ತುತಿಸಲು ನಾನು ಬದುಕಿರಲಿ; ನಿಮ್ಮ ನಿಯಮಗಳು ನನ್ನನ್ನು ಕಾಪಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:175
12 ತಿಳಿವುಗಳ ಹೋಲಿಕೆ  

ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?


ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.


ನಿನ್ನ ಸೇವಕನಾದ ನನ್ನ ಮೇಲೆ ದಯವಿಡು, ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಗೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು