Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ, ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಧರೆಯೊಳು ಪ್ರವಾಸಿಯಾಗಿ ನಾನಿರುವೆನಯ್ಯಾ I ನಿನ್ನಾಜ್ಞೆಗಳನು ನನಗೆ ಮರೆಮಾಡಬೇಡಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ; ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಈ ದೇಶದಲ್ಲಿ ಅಪರಿಚಿತನಾಗಿದ್ದೇನೆ. ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈ ಭೂಮಿಯಲ್ಲಿ ನಾನೊಬ್ಬ ಪ್ರವಾಸಿಯಾಗಿದ್ದೇನೆ; ನಿಮ್ಮ ಆಜ್ಞೆಗಳನ್ನು ನನಗೆ ಮರೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:19
12 ತಿಳಿವುಗಳ ಹೋಲಿಕೆ  

ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.


ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.


ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.


ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಹೀಗಿರುವುದರಿಂದ ನಾವು ಯಾವಾಗಲೂ ನಂಬಿಕೆಯುಳ್ಳವರಾಗಿರಬೇಕು; ದೇಹದಲ್ಲಿ ವಾಸಿಸುವವರೆಗೂ ಕರ್ತನಿಂದ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆ


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.


ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.


ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.


ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!


ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು