Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀನು ಗರ್ವಿಷ್ಠರನ್ನು ಗದರಿಸುತ್ತಿ, ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಶಾಪಗ್ರಸ್ತರು ನಿನ್ನ ಆಜ್ಞೆಗಳನು ಮೀರಿದವರು I ನಿನ್ನ ಧಿಕ್ಕಾರಕ್ಕೆ ಗುರಿಯಾಗುವರು ಆ ಗರ್ವಿಷ್ಠರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ಗರ್ವಿಷ್ಠರನ್ನು ಗದರಿಸುತ್ತೀ; ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಗರ್ವಿಷ್ಠರನ್ನು ಖಂಡಿಸುವೆ. ನಿನ್ನ ಆಜ್ಞೆಗಳಿಗೆ ವಿಧೇಯರಾಗದ ಅವರು ಶಾಪಗ್ರಸ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ಆಜ್ಞೆಗಳನ್ನು ಅನುಸರಿಸದೆ ತಪ್ಪಿಹೋಗುವ ಶಾಪಗ್ರಸ್ತರಾದ ಗರ್ವಿಷ್ಠರನ್ನು ನೀವು ಗದರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:21
29 ತಿಳಿವುಗಳ ಹೋಲಿಕೆ  

ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.


ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ.


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ದುಷ್ಟರು ಬಲೆಯೊಡ್ಡಿದ್ದಾರೆ, ನಾನು ನಿನ್ನ ನಿಯಮಗಳಿಂದ ತಪ್ಪಿಹೋಗುವುದಿಲ್ಲ.


ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:


ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


“ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.


ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.”


ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.


ಗರ್ವಿಷ್ಠರು ಮಾನಭಂಗ ಹೊಂದಲಿ, ಅವರು ಮೋಸದಿಂದ ನನಗೆ ಕೇಡು ಮಾಡಿದ್ದಾರೆ. ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುತ್ತಿರುವೆನು.


ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.


ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.


ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು