Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು; ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನಿಷ್ಪ್ರಯೋಜಕವಾದವುಗಳ ಮೇಲೆ ದೃಷ್ಟಿಸದಂತೆ ನನ್ನನ್ನು ಕಾಪಾಡು. ನಿನ್ನ ಮಾರ್ಗದಲ್ಲಿ ಜೀವಿಸಲು ನನಗೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ವ್ಯರ್ಥವಾದವುಗಳಿಂದ ನನ್ನ ಕಣ್ಣುಗಳನ್ನು ತಿರುಗಿಸಿ, ನಿಮ್ಮ ವಾಕ್ಯದ ಅನುಸಾರವಾಗಿ ನನ್ನ ಜೀವವನ್ನು ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:37
12 ತಿಳಿವುಗಳ ಹೋಲಿಕೆ  

ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.


ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.


ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.


ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ


ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.


ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ, ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. ವಾವ್.


“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,


ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.


ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು