Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಹಾಸ್ಯ ಅಪಹಾಸ್ಯ ಮಾಡಿದರು ಗರ್ವಿಷ್ಠರೆನ್ನನು I ಆದರೂ ನಾ ಬಿಡಲಿಲ್ಲ ನಿನ್ನ ಧರ್ಮಶಾಸ್ತ್ರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಗರ್ವಿಷ್ಠರು ನನ್ನನ್ನು ಬಹಳವಾಗಿ ಹಾಸ್ಯಮಾಡಿದರು; ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಗರ್ವಿಷ್ಠರು ನನ್ನನ್ನು ಗೇಲಿಮಾಡುತ್ತಲೇ ಇದ್ದರು. ನಾನಾದರೋ ನಿನ್ನ ಉಪದೇಶಗಳನ್ನು ಅನುಸರಿಸುತ್ತಲೇ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಅಹಂಕಾರಿಗಳು ನನ್ನನ್ನು ಕರುಣಿಸದೆ ಹಾಸ್ಯ ಮಾಡಿದರೂ, ನಾನು ನಿಮ್ಮ ನಿಯಮದಿಂದ ತೊಲಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:51
14 ತಿಳಿವುಗಳ ಹೋಲಿಕೆ  

ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ, ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ.


ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ.


ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.


ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ, ಯೆಹೋವನೇ, ನನಗೆ ಆಶಾಭಂಗಪಡಿಸಬೇಡ.


ನೀನು ಗರ್ವಿಷ್ಠರನ್ನು ಗದರಿಸುತ್ತಿ, ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು