Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:53 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ನಿನ್ನ ಶಾಸ್ತ್ರದ ಭ್ರಷ್ಠರನು ಕಂಡಾಗ I ನನಗೆ ಬರುತ್ತದೆ ಕೋಪೋದ್ರೇಕ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ನಿನ್ನ ಧರ್ಮಶಾಸ್ತ್ರಭ್ರಷ್ಟರಾದ ದುಷ್ಟರಿಗಾಗಿ ಉರಿಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ನಿನ್ನ ಉಪದೇಶಗಳನ್ನು ಅನುಸರಿಸದ ದುಷ್ಟರನ್ನು ನಾನು ಕಾಣುವಾಗ ಬಹುಕೋಪಗೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ನಿಮ್ಮ ನಿಯಮವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ, ರೋಷವು ನನ್ನನ್ನು ಆವರಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:53
15 ತಿಳಿವುಗಳ ಹೋಲಿಕೆ  

ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.


ನಿನ್ನ ನುಡಿಯನ್ನು ಕೈಗೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.


ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.


ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.


ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.


ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು,


ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, ನನ್ನ ಆಜ್ಞೆಗಳಲ್ಲಿ ನಡೆಯದೆ,


ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?


ಅವರ ಬೊಬ್ಬೆಯನ್ನೂ, ಮಾತುಗಳನ್ನೂ ಕೇಳಿದಾಗ ನಾನು ಬಹಳ ಸಿಟ್ಟುಗೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು