Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:67 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

67 ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು, ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

67 ಕಷ್ಟಾನುಭವಕೆ ಮುಂಚೆ ದಾರಿತಪ್ಪಿ ನಡೆದೆ I ಆದರೀಗ ನಡೆಯುತ್ತಿರುವೆ ನಿನ್ನ ನುಡಿಯಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

67 ಕಷ್ಟಾನುಭವಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಈಗಲಾದರೋ ನಿನ್ನ ನುಡಿಗಳನ್ನು ಕೈಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

67 ನಾನು ಸಂಕಟಪಡುವುದಕ್ಕಿಂತ ಮೊದಲು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದೆ; ಈಗಲಾದರೋ ನಾನು ನಿನ್ನ ಆಜ್ಞೆಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

67 ನಾನು ಬಾಧೆಪಡುವುದಕ್ಕಿಂತ ಮುಂಚೆ ದಾರಿತಪ್ಪಿಹೋಗುತ್ತಿದ್ದೆನು, ಆದರೆ ಈಗ ನಿಮ್ಮ ವಾಕ್ಯವನ್ನು ಪಾಲಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:67
16 ತಿಳಿವುಗಳ ಹೋಲಿಕೆ  

ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.


ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.


ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.


ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.


ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.


ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು