Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:69 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

69 ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

69 ಸುಳ್ಳು ಕಲ್ಪಿಸಿಹರಾ ಗರ್ವಿಗಳು ನಿನಗೆ ವಿರುದ್ಧವಾಗಿ I ನಾನೋ ಪಾಲಿಪೆ ನಿನ್ನ ನಿಯಮಗಳನು ಹೃತ್ಪೂರ್ವಕವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

69 ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳುಕಲ್ಪಿಸಿದ್ದಾರೆ; ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನೇಮಗಳನ್ನು ಕೈಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

69 ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳು ಹೇಳಿದರು. ನಾನಾದರೋ ನಿನ್ನ ಆಜ್ಞೆಗಳಿಗೆ ಪೂರ್ಣಹೃದಯದಿಂದ ವಿಧೇಯನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

69 ಅಹಂಕಾರಿಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು, ನಾನಾದರೋ ಪೂರ್ಣಹೃದಯದಿಂದ ನಿಮ್ಮ ಸೂತ್ರಗಳನ್ನು ಕೈಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:69
15 ತಿಳಿವುಗಳ ಹೋಲಿಕೆ  

ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥ ವೈದ್ಯರೇ.


ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ, ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ.


ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.


ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.


“ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’


ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ, ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.


ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.


ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.


“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.


ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.


ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು