Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:75 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

75 ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

75 ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

75 ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ ನೀನು ನಂಬಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

75 ಯೆಹೋವನೇ, ನಿನ್ನ ತೀರ್ಪುಗಳು ನ್ಯಾಯವಾದವುಗಳೆಂದು ನನಗೆ ತಿಳಿದಿದೆ. ನೀನು ನನ್ನನ್ನು ಶಿಕ್ಷಿಸಿದ್ದು ನನ್ನ ದೃಷ್ಟಿಯಲ್ಲಿ ನ್ಯಾಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

75 ಯೆಹೋವ ದೇವರೇ, ನಿಮ್ಮ ನಿಯಮಗಳು ನೀತಿಯುಳ್ಳವುಗಳು; ನಿಮ್ಮ ನಂಬಿಗಸ್ತಿಕೆಯಿಂದಲೇ ನೀವು ನನ್ನನ್ನು ಕಷ್ಟಪಡಿಸಿದ್ದೀರಿ ಎಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:75
13 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು. ಷಿನ್.


ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ. ಪೆ.


ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು, ಮಧ್ಯರಾತ್ರಿಯಲ್ಲಿ ಏಳುವೆನು.


ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ, ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.


ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.


ದೇವರು ಮನುಷ್ಯನ ಮೇಲೆ ಹೆಚ್ಚು ಗಮನವಿಡುವುದೂ, ಮನುಷ್ಯನೂ ಆತನ ನ್ಯಾಯವಿಚಾರಣೆಗೆ ಬರುವುದೂ, ಅವಶ್ಯವಿಲ್ಲ.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು