Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಕಟ್ಟಳೆಗಳನ್ನು ಅನುಸರಿಸುವ ನನ್ನನ್ನು, ಸಂಪೂರ್ಣವಾಗಿ ಕೈಬಿಡಬೇಡ. ಬೇತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ನಿಬಂಧನೆಗಳನು ಅನುಸರಿಸುವೆನಯ್ಯಾ I ನನ್ನನೆಂದಿಗೂ, ಪ್ರಭು, ಕೈಬಿಡದಿರಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ನಿಬಂಧನೆಗಳನ್ನು ಅನುಸರಿಸುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿದ್ದೇನೆ. ದಯವಿಟ್ಟು ನನ್ನನ್ನು ಕೈಬಿಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು; ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:8
11 ತಿಳಿವುಗಳ ಹೋಲಿಕೆ  

ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.


ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.


ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು, ನಿನ್ನ ವಾಕ್ಯವನ್ನು ಮರೆಯುವುದಿಲ್ಲ. ಗಿಮೆಲ್.


ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.


ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು