Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:82 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

82 ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ? ಎಂಬುವುದಕ್ಕೋಸ್ಕರವೇ ನನ್ನ ದೃಷ್ಟಿಯು ಮಂದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

82 ನಿನ್ನ ವಾಗ್ದಾನದ ನಿರೀಕ್ಷೆಯಲೆ ನನ್ನ ಕಣ್ಣು ಸೊರಗಿವೆ I “ನನಗೆಂದು ನೀಡುವೆ ಸಾಂತ್ವನ?” ಎಂದು ನಾ ಕೇಳುತ್ತಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

82 ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ ಎಂಬದಕ್ಕೋಸ್ಕರವೇ ನನ್ನ ದೃಷ್ಟಿ ಮಂದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

82 ನಿನ್ನ ವಾಗ್ದಾನಗಳಿಗಾಗಿ ಎದುರುನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಳ್ಳುತ್ತಿವೆ. ನೀನು ಯಾವಾಗ ನನ್ನನ್ನು ಸಂತೈಸುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

82 ನನ್ನ ಕಣ್ಣುಗಳು ನಿಮ್ಮ ವಾಗ್ದಾನಕ್ಕಾಗಿ ಕಾಯುತ್ತಾ ಮಂದವಾಗುತ್ತಿವೆ; “ನೀವು ಯಾವಾಗ ನನಗೆ ಆದರಣೆ ನೀಡುವಿರಿ?” ಎಂದು ನಾನು ಕೇಳುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:82
8 ತಿಳಿವುಗಳ ಹೋಲಿಕೆ  

ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.


ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ, ನನ್ನ ದೃಷ್ಟಿ ಮೊಬ್ಬಾಯಿತು.


ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.


ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.


ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.


ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನು.


ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು