Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:95 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

95 ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ, ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

95 ಹೊಂಚುಹಾಕುತಿಹರು ದುರುಳರು ಸಂಹರಿಸಲೆನ್ನನು I ನಾನೋ ನಿನ್ನ ಕಟ್ಟಳೆಗಳನು ಲಕ್ಷಿಸುತ್ತಿರುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

95 ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ; ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

95 ದುಷ್ಟರು ನನ್ನನ್ನು ನಾಶಮಾಡಲು ಪ್ರಯತ್ನಿಸಿದರು, ಆದರೆ ನಿನ್ನ ಒಡಂಬಡಿಕೆಯು ನನ್ನನ್ನು ಜ್ಞಾನಿಯನ್ನಾಗಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

95 ದುಷ್ಟರು ನನ್ನನ್ನು ನಾಶಮಾಡುವುದಕ್ಕೆ ನನಗಾಗಿ ಕಾಯುತ್ತಿದ್ದಾರೆ, ನಾನಾದರೋ ನಿಮ್ಮ ಶಾಸನಗಳನ್ನು ಆಲೋಚಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:95
19 ತಿಳಿವುಗಳ ಹೋಲಿಕೆ  

ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ, ಅವು ನನಗೆ ಬಹುಪ್ರಿಯವಾಗಿವೆ.


ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ, ಯೆಹೋವನೇ, ನನಗೆ ಆಶಾಭಂಗಪಡಿಸಬೇಡ.


ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.


ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.


ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು.


ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.


ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ, ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ.


ನಾನು ನಿನ್ನ ಸೇವಕನು, ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು.


ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ.


ನಿನ್ನ ಕಟ್ಟಳೆಗಳು ನನ್ನ ಪರಮಾನಂದ, ಅವೇ ನನ್ನ ಮಾರ್ಗದರ್ಶನ. ದಾಲಿತ್.


ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.


ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.


ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು.


ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು