ಕೀರ್ತನೆಗಳು 12:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.” ಅಧ್ಯಾಯವನ್ನು ನೋಡಿ |