Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 120:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಟ್ಟುವುವು ಶೂರನ ಹರಿತ ಬಾಣಗಳು I ಗಿಟ್ಟುವುವು ಉರಿಯುವ ಬೆಂಕಿ ಕೆಂಡಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಶೂರನ ಹದವಾದ ಬಾಣಗಳನ್ನೂ ಜಾಲಿಯ ಕೆಂಡಗಳನ್ನೂ ನಿನಗೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪರಾಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳಿಂದ ನಿನಗೆ ಶಿಕ್ಷೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 120:4
19 ತಿಳಿವುಗಳ ಹೋಲಿಕೆ  

ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.


ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,


ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.


ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ, ಅವನ ಮಾತುಗಳು ಬೆಂಕಿಯ ಉರಿಯಂತಿದೆ.


ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.


ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.


ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.


ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು.


ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.


ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.


ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ.


ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.


ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು