Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 121:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಭು ಕಾಯುವನು ನಿನ್ನ ಆಗುಹೋಗುಗಳನು I ಇಂದಿಗೂ ಎಂದೆಂದಿಗೂ ನಿನ್ನ ಕಾಯುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ಹೋಗುವಾಗಲೂ ಬರುವಾಗಲೂ ಇಂದಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ ಇಂದಿಗೂ ಎಂದೆಂದಿಗೂ ನಿಮ್ಮನ್ನು ಕಾಪಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 121:8
12 ತಿಳಿವುಗಳ ಹೋಲಿಕೆ  

ನೀವು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ಶುಭವುಂಟಾಗುವುದು.


ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.


ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ.


ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.


ನಾವೋ ಇಂದಿನಿಂದ ಸದಾಕಾಲವೂ ಯೆಹೋವನನ್ನು ಕೊಂಡಾಡುವೆವು. ಯೆಹೋವನಿಗೆ ಸ್ತೋತ್ರ!


ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.


ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.


ನೀವು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ಶಾಪ ಉಂಟಾಗುವುದು.


ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.


ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು