ಕೀರ್ತನೆಗಳು 126:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು - ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆಂದು ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ನಮ್ಮ ಬಾಯಿ ನಗೆಯಿಂದಲೂ, ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಜನಾಂಗಗಳು, “ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |