Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 126:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದುಃಖಿಸುತ್ತಾ ಬೀಜಬಿತ್ತಲು ಹೋದವನು I ಹರ್ಷಿಸುತ್ತಾ ಕೊಯ್ದು ತರುವನು ತೆನೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು ಹರ್ಷದಿಂದ ಸಿವುಡುಗಳನ್ನು ಹೊತ್ತುಕೊಂಡು ಬರುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಿತ್ತಲು ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವರು, ತಮ್ಮ ಸಿವುಡುಗಳನ್ನು ಹೊತ್ತುಕೊಂಡು ಆನಂದ ಗೀತದೊಡನೆ ತಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 126:6
10 ತಿಳಿವುಗಳ ಹೋಲಿಕೆ  

ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು