Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 128:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 128:1
24 ತಿಳಿವುಗಳ ಹೋಲಿಕೆ  

ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.


ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.


ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.


ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.


ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.


ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.


ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.


ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ, ಅನ್ಯಾಯ ಮಾಡುವುದೇ ಇಲ್ಲ.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?


“ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ.


ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.


ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.


ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!


ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.


“ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.


ನಿಮಗೆ ಊರಿನಲ್ಲಿಯೂ ಮತ್ತು ಹೊಲದಲ್ಲಿಯೂ ಶುಭವುಂಟಾಗುವುದು.


ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು