Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 130:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಂತರಾಳದಿಂದ ಪ್ರಭು, ಮೊರೆಯಿಡುತ್ತಿರುವೆ ನಿನಗೆ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ಜಲಾಗಾಧದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ; ಸಹಾಯಕ್ಕಾಗಿ ನಿನ್ನನ್ನೇ ಕೂಗಿಕೊಳ್ಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ಅಂತರಾಳದಿಂದ ನಿಮಗೆ ಮೊರೆಯಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 130:1
22 ತಿಳಿವುಗಳ ಹೋಲಿಕೆ  

ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.


ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.


ಆತನು ಮೇಲಣ ಲೋಕದಿಂದ ಕೈಚಾಚಿ, ನನ್ನನ್ನು ಹಿಡಿದು, ಮಹಾಜಲರಾಶಿಗಳೊಳಗಿಂದ ಎಳೆದನು.


“ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ.


ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.


ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.


ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.


“ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ.


ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.


“ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.


ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು