Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 132:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನನ್ನ ನೇಮನಿಯಮಗಳನು ನಿನ್ನ ಮಕ್ಕಳು ಅನುಸರಿಸುವರಾದರೆ I ಕೂರುವರು ಸದಾಕಾಲ ಅವರ ಮಕ್ಕಳ ನಿನ್ನಾ ಸಿಂಹಾಸನದ ಮೇಲೆ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವದಾದರೆ ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕೂತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಮಕ್ಕಳು ನನ್ನ ಒಡಂಬಡಿಕೆಗೂ ನಾನು ಆಜ್ಞಾಪಿಸಿದ ಕಟ್ಟಳೆಗಳಿಗೂ ವಿಧೇಯರಾದರೆ, ನಿನ್ನ ಸಂತಾನದ ಒಬ್ಬನು ಯಾವಾಗಲೂ ರಾಜನಾಗಿರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ಮಕ್ಕಳು ನನ್ನ ಶಾಸನಗಳನ್ನೂ ನನ್ನ ಒಡಂಬಡಿಕೆಯನ್ನು ಸನ್ಮಾನಿಸಿ, ಕೈಗೊಂಡರೆ, ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನದಲ್ಲಿ ಕೂರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 132:12
11 ತಿಳಿವುಗಳ ಹೋಲಿಕೆ  

ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;


ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು” ಎಂದು ಮೊರೆಯಿಡುತ್ತೇನೆ.


ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,


ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.


ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಾಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು