Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿರ್ಮೂಲ ಮಾಡಿದನಾತ ಅಮೋರ್ಯರ ಸೀಹೋನ್ ರಾಜನನು I ಬಾಷಾನಿನ ಅರಸ ಓಗನನು, ಕಾನಾನಿನ ರಾಜ್ಯಗಳೆಲ್ಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ಇದ್ದರು. ಕಾನಾನ್‍ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು; ಬಾಷಾನಿನ ರಾಜನಾದ ಓಗನನ್ನೂ ಕಾನಾನ್ ದೇಶದ ಎಲ್ಲಾ ಜನಾಂಗಗಳನ್ನೂ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಮೋರಿಯರ ಅರಸನಾದ ಸೀಹೋನನನ್ನು, ಬಾಷಾನಿನ ಅರಸನಾದ ಓಗನನ್ನೂ, ಕಾನಾನಿನ ಎಲ್ಲಾ ಅರಸರನ್ನೂ ದಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:11
8 ತಿಳಿವುಗಳ ಹೋಲಿಕೆ  

ರಾಜ್ಯಗಳನ್ನೂ, ಜನಾಂಗಗಳನ್ನು ಅವರಿಗೆ ವಶಪಡಿಸಿ, ಆ ರಾಜ್ಯಗಳನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟೆ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತ್ಯಗಳನ್ನು ಸ್ವಾಧೀನಪಡಿಸಿಕೊಂಡರು.


ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.


ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು