Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೊರಕಿಸುವನು ಪ್ರಭು ನ್ಯಾಯವನು ತನ್ನ ಪ್ರಜೆಗೆ I ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು; ತನ್ನ ಸೇವಕರನ್ನು ಕನಿಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಜನಾಂಗಗಳನ್ನು ದಂಡಿಸಿದನು. ತನ್ನ ಜನರಿಗಾದರೋ ಕರುಣೆಯುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ತಮ್ಮ ಜನರಿಗೆ ನ್ಯಾಯವನ್ನು ಸ್ಥಾಪಿಸುವರು, ತಮ್ಮ ಸೇವಕರ ಮೇಲೆ ಅನುಕಂಪವನ್ನೂ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:14
11 ತಿಳಿವುಗಳ ಹೋಲಿಕೆ  

ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.


ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.


ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.


ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.


ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.


ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.


ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.


ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.


ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು