Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಓ ಈಜಿಪ್ಟೆ, ನಿನ್ನೊಳು ಮಾಡಿದನು ಅದ್ಭುತ ಪವಾಡಗಳನು I ಫರೋಹನ ಮೇಣ್ ಅವನ ಸೇವಕರ ವಿರುದ್ಧ ಗೈದನವುಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ ಅವನ ಸೇವಕರಿಗೂ ವಿರೋಧವಾಗಿ ಅದ್ಭುತಗಳನ್ನೂ ಮಹತ್ಕಾರ್ಯಗಳನ್ನೂ ನಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ಫರೋಹನಿಗೂ ಅವನ ಸೇವಕರುಗಳಿಗೂ ವಿರೋಧವಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಜಿಪ್ಟೇ, ನಿಮ್ಮ ಮಧ್ಯದಲ್ಲಿ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ದೇವರು ಫರೋಹನಿಗೂ, ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:9
11 ತಿಳಿವುಗಳ ಹೋಲಿಕೆ  

ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.


ಆತನು ಐಗುಪ್ತ್ಯರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ,


ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.


ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.


ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.


ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು