Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪರಲೋಕದಲ್ಲಿರುವ ದೇವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಪರಲೋಕದ ದೇವರನ್ನು ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಪರಲೋಕದ ದೇವರನ್ನು ಕೊಂಡಾಡಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:26
8 ತಿಳಿವುಗಳ ಹೋಲಿಕೆ  

ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ,


ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.


ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.


ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.


ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.


ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,


“ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು